
ಹೊನ್ನಾಳಿ: ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಬಾಗೇವಾಡಿಯ ತುಂಗಭದ್ರಾ ನದಿಯಲ್ಲಿ ಮೊಸಳೆ ಕಾಣಿಸಿಕೊಂಡಿದ್ದು, ಸುತ್ತಮುತ್ತಲಿನ ಜನರಲ್ಲಿ ಆತಂಕ ಸೃಷ್ಟಿಸಿದೆ ನದಿಯ ದಡದಲ್ಲಿ ದನ ಕುರಿ ಮೇಯಿಸಲು ಹೋದ ಕೆಲವರಿಗೆ ಮೊಸಳೆ ಕಾಣಿಸಿಕೊಂಡಿದ್ದು, ಬಾಗೇವಾಡಿ ಸೇರಿದಂತೆ ಸುತ್ತಮುತ್ತಲಿನ ಜನರು ಆತಂಕಗೊಂಡಿದ್ದಾರೆ. ನದಿ ಪಾತ್ರದಲ್ಲಿ ಬಟ್ಟೆ ತೊಳೆಯಲು, ಸ್ನಾನ ಮಾಡಲು, ಜಾನುವಾರು ಮೇಯಿಸಲು ಹೋಗುವ ಜನರು ಎಚ್ಚರಿಕೆ ಇರಬೇಕಾಗಿದೆ.