
ದಾವಣಗೆರೆ, ಮಾ.03. (ಇಂಡೋ ಟೈಮ್ಸ್ ಮೀಡಿಯಾ | ಕ.ವಾ): ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮಾರ್ಚ್ 4 ರಂದು ಮಧ್ಯಾಹ್ನ 12.30ಕ್ಕೆ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ತೆಲಂಗಾಣ ಮತ್ತು ಆಂದ್ರ ಪ್ರದೇಶ ರಾಜ್ಯಗಳಲ್ಲಿ ಕೋಳಿ ಶೀತ ಜ್ವರದ ರೋಗೋದ್ರೇಕ ದೃಢಪಟ್ಟಿರುವ ಹಿನ್ನಲೆಯಲ್ಲಿ ಹಾಗೂ ರಾಜ್ಯದಲ್ಲಿ ಬಳ್ಳಾರಿ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಕೋಳಿಶೀತಜ್ವರ ಕಾಣಿಸಿಕೊಡಿರುವುದರಿಂದ ನಿಯಂತ್ರಣ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಸಭೆಯನ್ನು ಆಯೋಜಿಸಲಾಗಿದೆ.